
ಮೈಸೂರು ಜಿಲ್ಲೆಯ ಜಯಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಉಪರಾಷ್ಟ್ರೀಯ ಮಟ್ಟದ ಮಲೇರಿಯಾ ನಿರ್ಮೂಲನ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಜಿಲ್ಲಾ ಆರೋಗ್ಯ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಭಾ ಅವರು ಮಲೇರಿಯಾ ನಿರ್ಮೂಲನಾ ಪ್ರಗತಿ ಕಾರ್ಯಗಳ ಕುರಿತು ತಂಡಕ್ಕೆ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯು ವಲಸೆ ಕಾರ್ಮಿಕರನ್ನು ಗುರುತಿಸಿ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ತಪಾಸಣೆ ನಡೆಸುತ್ತಿರುವ ಬಗ್ಗೆ ತಂಡವು ಮಾಹಿತಿ ಸಂಗ್ರಹಿಸಿದೆ.