
ರಾಜ್ಯದ ಸುಮಾರು 7,000 ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಸೋಂಕು ತಗುಲಿದೆ ಎಂಬ ವರದಿಯನ್ನು ಆರೋಗ್ಯ ಇಲಾಖೆ ತಳ್ಳಿಹಾಕಿದೆ.
NACO ವರದಿಯಲ್ಲಿನ ಅಂಕಿ-ಅಂಶಗಳು ವಾಸ್ತವಕ್ಕೆ ದೂರವಾಗಿದ್ದು, ಕೇವಲ ಅಂದಾಜು ಲೆಕ್ಕಾಚಾರ ಎಂದು ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಹೆಚ್‌ಐವಿ ಸೋಂಕಿತರ ಪ್ರಮಾಣ ನಿಯಂತ್ರಣದಲ್ಲಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ.