
ರಾಷ್ಟ್ರೀಯ ಟಿ20 ತಂಡಕ್ಕೆ ಭುವನೇಶ್ವರ್ ಕುಮಾರ್ ಮರಳಿದ ಬೆನ್ನಲ್ಲೇ, ತನ್ನನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಹಿರಿಯ ವೇಗಿ ಮೊಹಮ್ಮದ್ ಶಮಿ ಅಸಮಾಧಾನ ಹೊರಹಾಕಿದ್ದಾರೆ.
ತನ್ನ ಶ್ರಮಕ್ಕೆ ಮನ್ನಣೆ ಸಿಗುತ್ತಿಲ್ಲವೆಂದು ಟೀಕಿಸಿರುವ ಶಮಿ, ತಂಡದಲ್ಲಿ ಅವಕಾಶ ಸಿಗದಿದ್ದರೂ ತನಗೆ ಯಾವುದೇ ನಷ್ಟವಿಲ್ಲವೆಂದು ಆಯ್ಕೆಗಾರರಿಗೆ ತಿರುಗೇಟು ನೀಡಿದ್ದಾರೆ.
ಶಮಿ ಪ್ರಸ್ತುತ ರಣಜಿ ಟ್ರೋಫಿ ಪಂದ್ಯಗಳ ಮೇಲೆ ಸಂಪೂರ್ಣ ಗಮನ ಹರಿಸುತ್ತಿದ್ದು, ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದಾಗಿ ತಿಳಿಸಿದ್ದಾರೆ.