
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಯಾವುದೇ ಅಧಿಕಾರವಿಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದು, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಯೋಜನೆಯ ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಆಗಸ್ಟ್ 15ರೊಳಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ತಮಿಳುನಾಡು ಮೇಕೆದಾಟು ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಚಿವರು ನೆನಪಿಸಿದ್ದಾರೆ.