
ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ 1,800ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ನ ವಿಜ್ಞಾನಿ ರಿತು ಕರಿಧಾಲ್ ಶ್ರೀವಾಸ್ತವ ಅವರು ವಿದ್ಯಾರ್ಥಿಗಳಿಗೆ ಸಂವಹನ ಕೌಶಲ ಮತ್ತು ನಿರಂತರ ಕಲಿಕೆಯ ಮಹತ್ವವನ್ನು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲ ಬಿ.ಸತೀಶ್ ಬಾಬು ಅವರು ಆರ್ಐಟಿಯಲ್ಲಿ ಪ್ರಸ್ತುತ 40ಕ್ಕೂ ಹೆಚ್ಚಿನ ಕೋರ್ಸ್ಗಳು ಲಭ್ಯವಿವೆ ಎಂದು ಮಾಹಿತಿ ನೀಡಿದರು.