Education
ರಾಮಯ್ಯ ಇನ್‌ಸ್ಟಿಟ್ಯೂಟ್‌ನಲ್ಲಿ 1,800 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ರಾಮಯ್ಯ ಇನ್‌ಸ್ಟಿಟ್ಯೂಟ್‌ನಲ್ಲಿ 1,800 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

prajavani2h
THE BRIEF
1

ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಯೋಜಿಸಿದ್ದ ಘಟಿಕೋತ್ಸವದಲ್ಲಿ 1,800ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

2

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್‌ನ ವಿಜ್ಞಾನಿ ರಿತು ಕರಿಧಾಲ್ ಶ್ರೀವಾಸ್ತವ ಅವರು ವಿದ್ಯಾರ್ಥಿಗಳಿಗೆ ಸಂವಹನ ಕೌಶಲ ಮತ್ತು ನಿರಂತರ ಕಲಿಕೆಯ ಮಹತ್ವವನ್ನು ತಿಳಿಸಿದರು.

3

ಸಂಸ್ಥೆಯ ಪ್ರಾಂಶುಪಾಲ ಬಿ.ಸತೀಶ್ ಬಾಬು ಅವರು ಆರ್‌ಐಟಿಯಲ್ಲಿ ಪ್ರಸ್ತುತ 40ಕ್ಕೂ ಹೆಚ್ಚಿನ ಕೋರ್ಸ್‌ಗಳು ಲಭ್ಯವಿವೆ ಎಂದು ಮಾಹಿತಿ ನೀಡಿದರು.