
ಮಂಡ್ಯದ ಬಿ.ಹಟ್ನ ಗ್ರಾಮದಲ್ಲಿ ಸಾಲಬಾಧೆಯಿಂದ ಬೇಸತ್ತ ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಎಂಬ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದಂಪತಿ ಕೃಷಿ ಉದ್ದೇಶಕ್ಕಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ ಸೇರಿದಂತೆ ಒಟ್ಟು 11 ರಿಂದ 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು.
ಘಟನಾ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದು, ಸಾಲದ ನೋಟಿಸ್‌ಗಳಿಂದ ಮನನೊಂದು ದಂಪತಿ ಈ ನಿರ್ಧಾರ ಕೈಗೊಂಡಿದ್ದಾರೆ.