
ಇಸ್ಲಾಂ ಧರ್ಮ ಶ್ರೇಷ್ಠ ಎಂದು ಹೇಳಿಕೆ ನೀಡಿದ ಸಚಿವ ಬಸವರಾಜ ರಾಯರೆಡ್ಡಿ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ರಾಯರೆಡ್ಡಿ ಅವರ ಹೇಳಿಕೆಯಿಂದ ಮುಸ್ಲಿಮೇತರ ಧರ್ಮೀಯರ ಭಾವನೆಗೆ ಧಕ್ಕೆ ಉಂಟಾಗಿದ್ದು, ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕೆಂದು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
ಕೊಪ್ಪಳದ ಕುಕನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಯರೆಡ್ಡಿ, ಇಸ್ಲಾಂ ಅತ್ಯಂತ ಮಾನವೀಯ ಧರ್ಮ ಮತ್ತು ತಾನು ಹಜ್ ಯಾತ್ರೆಗೆ ಹೋಗುವ ಆಸೆ ಹೊಂದಿದ್ದೇನೆ ಎಂದು ಹೇಳಿದ್ದರು.