
ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಈದ್ ಮಿಲಾದ್ ಆಚರಣೆ ವಿರೋಧಿಸಿ ಶಾಲೆಗೆ ನುಗ್ಗಿದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಕೋಟೆ ಪ್ರಸಾದ್, ಬೆಣ್ಣೆ ಕೃಷ್ಣ, ಶಿವಣ್ಣ ಸೇರಿದಂತೆ ಹಲವರ ವಿರುದ್ಧ ಬಿಎನ್‌ಎಸ್ ಸೆಕ್ಷನ್ 329(4), 352 ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲೆಯ ನಿಯಮದಂತೆ ಮಕ್ಕಳು ಕಲರ್ ಡ್ರೆಸ್‌ನಲ್ಲಿ ಬಂದಿದ್ದನ್ನು ಈದ್ ಮಿಲಾದ್ ಆಚರಣೆ ಎಂದು ತಪ್ಪಾಗಿ ಭಾವಿಸಿ, ಸುಮಾರು 7-8 ಜನರ ಗುಂಪು ಶಾಲೆಗೆ ನುಗ್ಗಿ ಗಲಾಟೆ ಮಾಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.