
ಚೆನ್ನೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಹೊಸೂರು-ಬೊಮ್ಮಸಂದ್ರ ಮೆಟ್ರೋ ಮಾರ್ಗಕ್ಕೆ ಅನುಮೋದನೆ ಕೋರಿದ್ದಾರೆ.
ಪ್ರಧಾನಿ ಮೋದಿ ಅವರು ಅಕ್ಟೋಬರ್ 11ರ ಭಾನುವಾರ ಚೆನ್ನೈ ಮೆಟ್ರೋ ಹಂತ II ರ 15 ಕಿ.ಮೀ. ಪೂನಮಲ್ಲಿ ಬೈಪಾಸ್-ವಡಪಳನಿ ಮಾರ್ಗವನ್ನು ಉದ್ಘಾಟಿಸಿ ಸಿಎಂ ವಿಜಯ್ ಅವರೊಂದಿಗೆ ರೈಲು ಪ್ರಯಾಣ ಮಾಡಿದರು.
ತಮಿಳುನಾಡು ಸಿಎಂ ವಿಜಯ್ ಅವರು ಕೇಂದ್ರ ಬಜೆಟ್ನಲ್ಲಿ ಘೋಷಿಸಲಾದ ಹೈಸ್ಪೀಡ್ ರೈಲು ಕಾರಿಡಾರ್ಗಳಿಗೆ ಧನ್ಯವಾದ ತಿಳಿಸಿ, ಗೋದಾವರಿ-ಕಾವೇರಿ ಸಂಪರ್ಕ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಕೈಗೆತ್ತಿಕೊಳ್ಳಲು ವಿನಂತಿಸಿದರು.