
ಕರ್ನಾಟಕದ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ 2027ರಿಂದ ಮಹತ್ವದ ಬದಲಾವಣೆ ಜಾರಿಗೆ ಬರಲಿದ್ದು, ರಾಜ್ಯದ ಎಲ್ಲಾ ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಒಂದೇ ಪ್ರಶ್ನೆಪತ್ರಿಕೆ ಇರಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ರಾಜ್ಯಮಟ್ಟದ ಪ್ರಶ್ನೆಪತ್ರಿಕೆಯನ್ನು ಸಿದ್ಧಪಡಿಸಿ ಡಿಜಿಟಲ್ ರೂಪದಲ್ಲಿ ಕಾಲೇಜುಗಳಿಗೆ ರವಾನಿಸಲಿದೆ.
ಈ ಹೊಸ ವ್ಯವಸ್ಥೆಯು ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ರಾಜ್ಯದ ಎಲ್ಲಾ ಕಾಲೇಜುಗಳಿಗೂ ಅನ್ವಯಿಸಲಿದೆ.