
ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು 'ಫಿನಿಕ್ಸ್' ಸಿನಿಮಾ ನಿರ್ಮಾಣದ ಹೆಸರಿನಲ್ಲಿ 3 ಕೋಟಿ 85 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಭಾಸ್ಕರ್ ಶೆಟ್ಟಿ ದೂರು ನೀಡಿದ್ದಾರೆ.
ಸೆಪ್ಟೆಂಬರ್ 23ರಂದು ಹಣಕಾಸಿನ ವ್ಯವಹಾರ ನಡೆದಿದ್ದು, ಆರು ತಿಂಗಳಲ್ಲಿ ಹಣ ಮರಳಿಸುವುದಾಗಿ ಭರವಸೆ ನೀಡಿದ್ದರೂ ಮೂರು ವರ್ಷ ಕಳೆದರೂ ವಾಪಸ್ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಹಣ ಕೇಳಲು ಹೋದಾಗ ಬೆದರಿಕೆ ಹಾಕಲಾಗಿದೆ ಎಂದು ದೂರುದಾರರು ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಮೂಲಕ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.