
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ಬಳಿ ಪಾಕ್ ಸೇನೆಯ ತರಬೇತಿ ವಿಮಾನವೊಂದು ಪತನಗೊಂಡು ಇಬ್ಬರು ಪ್ರಮುಖ ಪೈಲಟ್‌ಗಳು ಮೃತಪಟ್ಟಿದ್ದಾರೆ.
ಮೃತರನ್ನು ಮೇಜರ್ ಹುಸ್ನೇನ್ ಶಹಜಾದ್ ಹುಮಾಯೂನ್ ಮತ್ತು ಶಿಕ್ಷಣಾರ್ಥಿ ಪೈಲಟ್ ಕ್ಯಾಪ್ಟನ್ ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ.
ಕ್ವೆಟ್ಟಾ ಜಿಲ್ಲೆಯ ನವಾನ್ ಕಿಲ್ಲಿ ಪ್ರದೇಶದಲ್ಲಿ ಮುಶಕ್ ಮಾದರಿಯ ತರಬೇತಿ ವಿಮಾನವು ಹಾರಾಟ ನಡೆಸುತ್ತಿದ್ದಾಗ ತಾಂತ್ರಿಕ ದೋಷದಿಂದ ಈ ದುರಂತ ಸಂಭವಿಸಿದೆ.