
ಭಾರತೀಯ ಹವಾಮಾನ ಇಲಾಖೆಯು ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗಂಟೆಗೆ 30 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.