
ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಜರಾತ್ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ.
ವಿಶ್ವದ ಅತಿ ಎತ್ತರದ 'ಸ್ಟ್ಯಾಚ್ಯೂ ಆಫ್ ಯೂನಿಟಿ' ಸುತ್ತಮುತ್ತಲಿನ ಪ್ರವಾಸೋದ್ಯಮ, ಮೂಲಸೌಕರ್ಯ ಮತ್ತು ಪರಿಸರ ಸ್ನೇಹಿ ಯೋಜನೆಗಳನ್ನು ಈ ವೇಳೆ ಉತ್ತೇಜಿಸಲಾಗಿದೆ.
ಪ್ರವಾಸಿಗರಿಗೆ ಇ-ಬಸ್ಸುಗಳು ಹಾಗೂ ಪರಿಸರ ಸ್ನೇಹಿ ವಾಹನಗಳ ಸಂಚಾರ ಸೌಲಭ್ಯದೊಂದಿಗೆ ಸುಧಾರಿತ ಕಂಟ್ರೋಲ್ ರೂಮ್ ಅನ್ನು ಹಸ್ತಾಂತರಿಸಲಾಯಿತು.