
ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ಅವರು ಮುಂಬೈನ ತಮ್ಮ ನಿವಾಸದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ನಿಧನರಾಗಿದ್ದಾರೆ.
ಅವರಿಗೆ 59 ವರ್ಷ ವಯಸ್ಸಾಗಿದ್ದು, ಶನಿವಾರ ಮುಂಜಾನೆ ಈ ಆಕಸ್ಮಿಕ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರೊಂದಿಗೆ 'ಕಾಬಿಲ್' ಚಿತ್ರದಲ್ಲಿ ಕೆಲಸ ಮಾಡಿದ್ದ ನಟ ಹೃತಿಕ್ ರೋಷನ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದ್ದಾರೆ.