Indian Politics
7 ರಾಜ್ಯಗಳ ವಿಧಾನಸಭೆ ಚುನಾವಣೆ: ನಿತಿನ್ ನವೀನ್ ಕಾರ್ಯತಂತ್ರದ ಸಭೆ

7 ರಾಜ್ಯಗಳ ವಿಧಾನಸಭೆ ಚುನಾವಣೆ: ನಿತಿನ್ ನವೀನ್ ಕಾರ್ಯತಂತ್ರದ ಸಭೆ

prajavani1h
THE BRIEF
1

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಮುಂದಿನ ವರ್ಷ ನಡೆಯಲಿರುವ 7 ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಕಾರ್ಯತಂತ್ರದ ಸಭೆ ನಡೆಸಿದರು.

2

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ನೂತನ ಪದಾಧಿಕಾರಿಗಳು, ರಾಜ್ಯ ಘಟಕಗಳ ಅಧ್ಯಕ್ಷರು, ರಾಜ್ಯ ಘಟಕಗಳ ಉಸ್ತುವಾರಿಗಳು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಿದ್ದರು.

3

2027ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ, ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ ಉಳಿದ ಐದು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿದೆ.