
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಮುಂದಿನ ವರ್ಷ ನಡೆಯಲಿರುವ 7 ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪದಾಧಿಕಾರಿಗಳ ಜೊತೆ ಕಾರ್ಯತಂತ್ರದ ಸಭೆ ನಡೆಸಿದರು.
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ನೂತನ ಪದಾಧಿಕಾರಿಗಳು, ರಾಜ್ಯ ಘಟಕಗಳ ಅಧ್ಯಕ್ಷರು, ರಾಜ್ಯ ಘಟಕಗಳ ಉಸ್ತುವಾರಿಗಳು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸಿದ್ದರು.
2027ರಲ್ಲಿ ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ, ಹಿಮಾಚಲ ಪ್ರದೇಶ ಮತ್ತು ಗುಜರಾತ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಹೊರತುಪಡಿಸಿ ಉಳಿದ ಐದು ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿದೆ.