
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 59ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.
ಪವಿತ್ರಾ ಗೌಡ ಸಿಂಗಲ್ ಮದರ್ ಆಗಿದ್ದು, ಮಗಳ ಭವಿಷ್ಯದ ದೃಷ್ಟಿಯಿಂದ ಜಾಮೀನು ನೀಡಬೇಕೆಂದು ಅವರ ಪರ ವಕೀಲರು ವಾದ ಮಂಡಿಸಿದ್ದರು.
ಪ್ರದೋಶ್ ಮಾಫಿ ಸಾಕ್ಷಿ ವಿರುದ್ಧ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಲಯ ರದ್ದುಗೊಳಿಸಿದ್ದು, ಸೋಮವಾರ ಸಾಕ್ಷಿ ದಾಖಲಾಗುವುದು ಖಚಿತವಾಗಿದೆ.