
ಬೆಂಗಳೂರಿನ ಕಂಠೀರವ ಸ್ಟೂಡಿಯೋ ಬಳಿ ಅಂಡರ್‌ಪಾಸ್ ಕಾಮಗಾರಿ ನಡೆಯುತ್ತಿದ್ದಾಗ ಮಣ್ಣಿನ ತಡೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಸುಮಾರು 20 ಅಡಿ ಆಳದ ಗುಂಡಿಯಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ಪರಿಮಳ್ (31) ಸ್ಥಳದಲ್ಲೇ ಮೃತಪಟ್ಟರೆ, ಸೋನಾರಾಮ್ (26) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಸದಾನಂದ್, ಸುನೀಲ್ ಮತ್ತು ಇಮ್ತಿಯಾಯಾಜ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಿಡಿಎ ವತಿಯಿಂದ ಈ ಕಾಮಗಾರಿ ನಡೆಯುತ್ತಿತ್ತು.