
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಬಾಗರಬಾವಿ ಅಂಬೇಡ್ಕರ್ ಕಾಲೇಜಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಆರ್.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
ಎನ್.ಡಿ.ಇ ಅಭ್ಯರ್ಥಿ ಎ.ಪಿ. ರಂಗನಾಥ್ ಅವರಿಗೆ ಬೆಂಬಲ ಸೂಚಿಸಲು ತೆರಳಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದರು ಎಂದು ಶಾಸಕ ಮುನಿರತ್ನ ಆರೋಪಿಸಿದ್ದು, ಪೊಲೀಸರು ರಕ್ಷಣೆ ಮಾಡದಿದ್ದರೆ ಸಾಯಿಸುತ್ತಿದ್ದರು ಎಂದಿದ್ದಾರೆ.
ಈ ಘಟನೆಯ ಕುರಿತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಶಾಸಕ ಮುನಿರತ್ನ ಅವರು ಈ ಸಂಪೂರ್ಣ ಮಾಹಿತಿಯನ್ನು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ.