
ನಮ್ಮ ಮೆಟ್ರೋದ ಪಿಂಕ್ ಮತ್ತು ಬ್ಲೂ ಲೈನ್ ಮಾರ್ಗಗಳಲ್ಲಿ ಅತ್ಯಾಧುನಿಕ ಕಮ್ಯುನಿಕೇಷನ್ ಬೇಸ್ಡ್ ಟ್ರೈನ್ ಕಂಟ್ರೋಲ್ (CBTC) ಸಿಗ್ನಲಿಂಗ್ ವ್ಯವಸ್ಥೆಗೆ ಕೇಂದ್ರ ರೈಲ್ವೆ ಮಂಡಳಿ ತಾತ್ವಿಕ ಅನುಮೋದನೆ ನೀಡಿದೆ.
ಈ ಅನುಮೋದನೆಯು ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಪಿಂಕ್ ಲೈನ್ ಮತ್ತು ಸಿಲ್ಕ್ ಬೋರ್ಡ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣ ಸಂಪರ್ಕಿಸುವ ಬ್ಲೂ ಲೈನ್ ಮಾರ್ಗಗಳಿಗೆ ಅನ್ವಯಿಸುತ್ತದೆ.
ಬಿಎಂಆರ್ಸಿಎಲ್ ಮುಂದಿನ ತಿಂಗಳು ಪಿಂಕ್ ಲೈನ್ ವಾಣಿಜ್ಯ ಸಂಚಾರ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದು, ಬ್ಲೂ ಲೈನ್ ಮುಂದಿನ ವರ್ಷದ ವೇಳೆಗೆ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.