
ದುಬೈನಿಂದ ಬೆಂಗಳೂರಿಗೆ ಇಂಡಿಗೊ ವಿಮಾನದಲ್ಲಿ ಬಂದಿದ್ದ ಮೊಹಮ್ಮದ್ ಸಿರಾಜ್ ಎಂಬ ಪ್ರಯಾಣಿಕನು, ಬಾಯಿಯಲ್ಲಿ 82 ಗ್ರಾಂ ತೂಕದ ಚಿನ್ನದ ಕ್ಯಾಪ್ಸೂಲ್ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಬುಧವಾರ ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ತಪಾಸಣೆ ನಡೆಸುತ್ತಿದ್ದಾಗ, ಪ್ರಯಾಣಿಕನ ವರ್ತನೆಯಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಹೆಚ್ಚಿನ ತಪಾಸಣೆ ನಡೆಸಿ ಚಿನ್ನವನ್ನು ಪತ್ತೆಹಚ್ಚಿದ್ದಾರೆ.
ಬಂಧಿತ ಪ್ರಯಾಣಿಕನು ಬೆಂಗಳೂರಿನಿಂದ ಗಾಜಿಯಾಬಾದ್ಗೆ ತೆರಳಲು ಸಿದ್ಧನಾಗಿದ್ದಾಗ ಈ ಘಟನೆ ನಡೆದಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ವಿಮಾನ ನಿಲ್ದಾಣದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.