ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡಿದ್ದ ವೈದ್ಯ ಟಿ. ನಾಗೇಂದ್ರಪ್ಪ ಅವರ ವಿರುದ್ಧ ಪೊಲೀಸರು ದಾಖಲಿಸಿದ್ದ ಎರಡು ಎಫ್ಐಆರ್ಗಳಿಗೆ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
ದೂರುದಾರರಾದ ನಸ್ರೀನಾ ಮತ್ತು ಮೊಹಮ್ಮದ್ ಶೈದುಲ್ಲಾ ಇಸ್ಲಾಂ ಕಳೆದ 15 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಪೀಠ ಸೂಚಿಸಿದೆ.
ಪೊಲೀಸರ ನಡೆ ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿದೆ ಎಂದು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಿದ್ದಾರೆ.