
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಸುಧಾರಿಸಿದೆ.
ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 109.75 ಅಡಿಗಳಿಗೆ ತಲುಪಿದ್ದು, ತುಂಗಭದ್ರಾ ಜಲಾಶಯದಲ್ಲಿ 1,629.20 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
ಆಗಸ್ಟ್ 21ರವರೆಗೆ ಕರ್ನಾಟಕ ಸೇರಿದಂತೆ ದೇಶದ 14 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇದಕ್ಕೆ ಕಾರಣವಾಗಿದೆ.