
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದಾರೆ.
ಅರ್ಜಿದಾರರ ಪರ ವಕೀಲರಾದ ಎಸ್. ಪ್ರಸನ್ನ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಈ ಪ್ರಕರಣದ ವಿಚಾರಣೆ ಅಕ್ಟೋಬರ್ 13ರಂದು ನಡೆಯಲಿದೆ.
ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ವಿರೋಧಿಸಿ ಇಂಡಿಯಾ ಒಕ್ಕೂಟದ ವತಿಯಿಂದ ಚಲೋ ದಿಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.