International
ಚೀನಾ ಗಡಿಯಲ್ಲಿ ಶಾಂತಿ, ಸೌಹಾರ್ದ ಮುಖ್ಯ: ಭಾರತ

ಚೀನಾ ಗಡಿಯಲ್ಲಿ ಶಾಂತಿ, ಸೌಹಾರ್ದ ಮುಖ್ಯ: ಭಾರತ

prajavani1h
THE BRIEF
1

ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ದ್ವಿಪಕ್ಷೀಯ ಸಂಬಂಧಗಳಿಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಭಾರತ ಮಂಗಳವಾರ ಹೇಳಿದೆ.

2

ಅರುಣಾಚಲ ಪ್ರದೇಶದ 27 ಸ್ಥಳಗಳನ್ನು ಭಾರತದ ನಕ್ಷೆಯಲ್ಲಿ ಗುರುತಿಸಿರುವುದನ್ನು ಚೀನಾ ಟೀಕಿಸಿದ್ದಕ್ಕೆ, ಆ ರಾಜ್ಯವು ಭಾರತದ ಅವಿಭಾಜ್ಯ ಭಾಗ ಎಂದು ವಿದೇಶಾಂಗ ಸಚಿವಾಲಯ ತಿರುಗೇಟು ನೀಡಿದೆ.

3

ಕಳೆದ ವಾರ ನಡೆದ ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನಾ ಸಭೆಯಲ್ಲಿ ಉಭಯ ದೇಶಗಳು ಗಡಿ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಚರ್ಚಿಸಿವೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.