
ಕಾಂಗ್ರೆಸ್ನ ಅರಾಜಕತೆಯ ಮನಃಸ್ಥಿತಿಯನ್ನು ಬಯಲು ಮಾಡಲು ಮತ್ತು ಯುವ ಸಮುದಾಯಕ್ಕೆ ಮಾಹಿತಿ ನೀಡಲು ನವೆಂಬರ್ 1ರಿಂದ 30ರವರೆಗೆ 'ಪ್ರಜಾಪ್ರಭುತ್ವ ಉಳಿಸಿ- ಅರಾಜಕತೆ ಅಳಿಸಿ' ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಎಸ್ಐಆರ್ ವಿಚಾರದಲ್ಲಿ ಯುವಜನರನ್ನು ತಪ್ಪುದಾರಿಗೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಅಭಿಯಾನದ ಭಾಗವಾಗಿ ನವೆಂಬರ್ 3ರಂದು ಹುಬ್ಬಳ್ಳಿಯಲ್ಲಿ ಹಾಗೂ ನವೆಂಬರ್ 5ರಂದು ಬೆಂಗಳೂರಿನಲ್ಲಿ ಸಂವಾದ ಗೋಷ್ಠಿಗಳನ್ನು ಆಯೋಜಿಸಲಾಗಿದೆ.