
ವಿರೋಧ ಪಕ್ಷಗಳು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಿಂದ 12ರವರೆಗೆ ಸುಮಾರು 23 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ದೆಹಲಿ ಮೆಟ್ರೋದ 45 ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಂದ್ ಮಾಡಲಾಗಿದ್ದು, ಶನಿವಾರ ಬೆಳಗ್ಗೆ 4ರಿಂದ ಮಧ್ಯಾಹ್ನ 2ರವರೆಗೆ 75 ರೈಲುಗಳನ್ನು ರದ್ದುಗೊಳಿಸಲಾಗಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.