
ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 96 ರನ್‌ಗಳ ಜೊತೆಯಾಟದೊಂದಿಗೆ ಈ ಜೋಡಿಯು 2026ರಲ್ಲಿ ಟಿ20 ಕ್ರಿಕೆಟ್‌ನಲ್ಲಿ 1000 ರನ್‌ಗಳನ್ನು ಪೂರೈಸಿದೆ.
ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಬಾರಿ 50+ ರನ್‌ಗಳ ಜೊತೆಯಾಟವಾಡಿದ ಜಗತ್ತಿನ ಏಕೈಕ ಜೋಡಿ ಎಂಬ ಹೆಗ್ಗಳಿಕೆಗೂ ಇವರು ಪಾತ್ರರಾಗಿದ್ದಾರೆ.