
ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆ (ಕ್ಯಾಮ್ಸ್) ನೈತಿಕ ಬೆಂಬಲ ಮಾತ್ರ ನೀಡಲು ನಿರ್ಧರಿಸಿದೆ.
ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ಕ್ಯಾಮ್ಸ್ ಸ್ಪಷ್ಟಪಡಿಸಿದ್ದು, ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.
ಕಾವೇರಿ ಜಲವಿವಾದದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಈ ಬಂದ್ನಲ್ಲಿ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.