
ಬೆಂಗಳೂರಿನಲ್ಲಿ ಕ್ಯಾಬ್ಗಳ ದರ ಸುಲಿಗೆಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆಯು ಎಲ್ಲಾ ಯೆಲ್ಲೋ ಬೋರ್ಡ್ ಟ್ಯಾಕ್ಸಿಗಳಿಗೆ ಫೇರ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ.
ಹೊಸ ವಾಹನಗಳ ನೋಂದಣಿ ಮತ್ತು ಹಳೆಯ ಕ್ಯಾಬ್ಗಳ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣಕ್ಕೆ ಫೇರ್ ಮೀಟರ್ ಅಳವಡಿಕೆ ಕಡ್ಡಾಯವಾಗಿದ್ದು, ನಿಯಮ ಪಾಲಿಸದಿದ್ದರೆ ನೋಂದಣಿ ಪ್ರಕ್ರಿಯೆ ನಡೆಯುವುದಿಲ್ಲ.
ಓಲಾ, ಉಬರ್ ಮತ್ತು ರ್ಯಾಪಿಡೋ ಸೇರಿದಂತೆ ಆ್ಯಪ್ ಆಧಾರಿತ ಅಗ್ರಿಗೇಟರ್ ಕಂಪನಿಗಳು ಸಮಯಕ್ಕೆ ತಕ್ಕಂತೆ ದರ ಬದಲಾಯಿಸುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಆಯುಕ್ತರು ತಿಳಿಸಿದ್ದಾರೆ.