
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಜುಲೈ 29ರಿಂದ ಆಗಸ್ಟ್ 2ರವರೆಗೆ ಬಿಳಿಗುಂಡ್ಲುವಿನಲ್ಲಿ ಕೇವಲ 158 ರಿಂದ 550 ಕ್ಯೂಸೆಕ್ ನೀರು ಹರಿದಿದ್ದು, CWRC ನಿರ್ದೇಶಿಸಿದ 3,500 ಕ್ಯೂಸೆಕ್ಗಿಂತ ತೀರಾ ಕಡಿಮೆಯಾಗಿದೆ ಎಂದು ತಮಿಳುನಾಡು ಆರೋಪಿಸಿದೆ.
ಆಗಸ್ಟ್ 3ರ ವೇಳೆಗೆ ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 77.537 ಟಿಎಂಸಿ ನೀರು ಸಂಗ್ರಹವಿದ್ದು, ತಮಿಳುನಾಡಿಗೆ 26.954 ಟಿಎಂಸಿ ನೀರು ಸಿಗಬೇಕು ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.