
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ 10ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ 90ಕ್ಕೂ ಹೆಚ್ಚು ಪೊಲೀಸರು ಆಗಸ್ಟ್ 11ರ ರಾತ್ರಿ 8ರವರೆಗೆ ಪ್ರತಿ ಬ್ಯಾರಕ್‌ನಲ್ಲಿ ತೀವ್ರ ಶೋಧ ನಡೆಸಿದರು.
ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲೂ ಮೊಬೈಲ್ ಪತ್ತೆಯಾಗಿದ್ದು, ಈ ಕುರಿತು ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.