
ಪೋಲೆಂಡ್ ಪ್ರಧಾನಮಂತ್ರಿ ಡೊನಾಲ್ಡ್ ಫ್ರಾನ್ಸಿಸ್ಜೆಕ್ ಟಸ್ಕ್ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಸಚಿವ ಕೃಷ್ಣ ಬೈರೇಗೌಡ ಹಾಗೂ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ವಾಗತಿಸಿದರು.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು ರಾಜ್ಯದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ.
ಬೆಂಗಳೂರಿಗೆ ಬರುವ ಮುನ್ನ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವ್ಯಾಪಾರ ಮತ್ತು ವ್ಯವಹಾರ ಒಪ್ಪಂದಗಳ ಕುರಿತು ಚರ್ಚೆ ನಡೆಸಿದ್ದಾರೆ.