
ಉತ್ಪಾದನಾ ವೆಚ್ಚ ಹೆಚ್ಚಳ ಹಾಗೂ ಸಕ್ಕರೆ ಕಾರ್ಖಾನೆಗಳ ಶೋಷಣೆ ತಡೆಯುವಂತೆ ಆಗ್ರಹಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘವು ಕೇಂದ್ರ ಸಮಿತಿಗೆ ಪತ್ರ ಬರೆದಿದೆ.
ಕಬ್ಬಿನ ಎಫ್‌ಆರ್‌ಪಿ ದರವನ್ನು ಕನಿಷ್ಠ ಪ್ರತಿ ಟನ್‌ಗೆ 4,500 ರೂಪಾಯಿಗೆ ಏರಿಸಬೇಕು ಹಾಗೂ ರೈತರ ಹೊಲದ ಸಕ್ಕರೆ ಇಳುವರಿ ಆಧರಿಸಿ ದರ ನಿಗದಿಪಡಿಸಬೇಕು ಎಂದು ಕೋರಲಾಗಿದೆ.
ಸಕ್ಕರೆ ನಿಯಂತ್ರಣ ಕಾಯ್ದೆಯಂತೆ ಕಬ್ಬು ಪೂರೈಕೆ ಮಾಡಿದ 14 ದಿನಗಳೊಳಗೆ ರೈತರಿಗೆ ಹಣ ಪಾವತಿಸುವುದನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಲಾಗಿದೆ.