ಗದಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಡಿಯಲ್ಲಿ 9,02,947 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಿ ಶೇ. 100 ಸಾಧನೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಪ್ರಕಾರ, 7,74,971 ಫಾರ್ಮ್ಗಳ ಡಿಜಿಟಲೀಕರಣ ಪೂರ್ಣಗೊಂಡಿದ್ದು, ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ.
ಬಿಎಲ್ಒಗಳು ಆಗಸ್ಟ್ 8ರವರೆಗೆ ಮನೆ ಮನೆಗೆ ಭೇಟಿ ನೀಡಲಿದ್ದು, ಸೆಪ್ಟೆಂಬರ್ 16ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.