
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಕರ್ನಾಟಕದ ಬೀದರ್ ಮೂಲದವರು ಸೇರಿದಂತೆ ಒಟ್ಟು 9 ಜನರು ಮೃತಪಟ್ಟಿದ್ದಾರೆ.
ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ಇ-ಆಟೋಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ 7 ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಹೀರ್ ಮಂಡಲದ ಕವೇಲಿ ಬಳಿ ನಡೆದ ಮತ್ತೊಂದು ಅಪಘಾತದಲ್ಲಿ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಮೃತಪಟ್ಟಿದ್ದು, ಗಾಯಾಳುಗಳನ್ನು ಜಹೀರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ.