
ಖಾಸಗಿ ಜಗಳದ ಹಿನ್ನೆಲೆಯಲ್ಲಿ ಬೈಕ್ ಸವಾರ, ಆತನ ತಾಯಿ ಮತ್ತು 69 ವರ್ಷದ ತಾತನ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಮಾಲೂರು ಜೆಎಂಎಫ್ಸಿ ನ್ಯಾಯಾಧೀಶೆ ಗಾಯತ್ರಿ ಅವರ ವರ್ತನೆಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠವು, ನ್ಯಾಯಾಧೀಶರು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅಭಿಪ್ರಾಯಪಟ್ಟು, ದಾಖಲಿಸಲಾದ ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮಾಲೂರು ನಗರದ ಕೆ.ಎಂ.ವಿನಯ್, ಕವಿತಾ ಮತ್ತು ವೆಂಕಟೇಶ್ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ನ್ಯಾಯಾಧೀಶರ ನಡವಳಿಕೆ ವಿಶ್ವಾಸ ಮೂಡಿಸುವಂತಿರಬೇಕು ಎಂದು ಎಚ್ಚರಿಸಿದೆ.