
ಬೀದರ್ ಜಿಲ್ಲೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಳೆದ 20 ದಿನಗಳಲ್ಲಿ 26 ರೈತರಿಗೆ ಸೇರಿದ 100ಕ್ಕೂ ಹೆಚ್ಚು ಎಕರೆ ಪ್ರದೇಶದ ಕಟಾವಿಗೆ ಬಂದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ.
ಹೊಲಗಳ ಮೇಲೆ ಹಾದುಹೋಗಿರುವ ವಿದ್ಯುತ್ ತಂತಿಗಳು ಕೈಗೆ ತಾಗುವಷ್ಟು ಕೆಳಮಟ್ಟದಲ್ಲಿ ಜೋತು ಬಿದ್ದಿರುವುದು ಗಾಳಿಗೆ ತಂತಿಗಳು ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಲು ಕಾರಣವಾಗಿದೆ.
ಬೆಳೆ ಕಳೆದುಕೊಂಡ ರೈತರಿಗೆ ಜೆಸ್ಕಾಂ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವ ಜೊತೆಗೆ ಅಪಾಯಕಾರಿಯಾಗಿ ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.