
ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈಶಾನ್ಯ ಮಧ್ಯಪ್ರದೇಶದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶದಿಂದಾಗಿ ಆಗಸ್ಟ್ 25 ರವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಆಗಸ್ಟ್ 26 ರವರೆಗೆ ಒಡಿಶಾದಲ್ಲಿ ವ್ಯಾಪಕ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ಭಾಗಗಳು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಳೆ ಮುಂದುವರಿಯಲಿದ್ದು, ಆಗಸ್ಟ್ 27 ರವರೆಗೆ ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.