
ಕಲುಷಿತ ನೀರಿನಿಂದ ಹರಡುವ ರೋಗಗಳಿಗೆ ಕಡಿವಾಣ ಹಾಕಲು ರಾಜ್ಯದ ಎಲ್ಲಾ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಕುಡಿಯಲು ಬಿಸಿ ನೀರು ನೀಡುವುದನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಆರೋಗ್ಯ ಸಚಿವ ಯುಟಿ ಖಾದರ್ ಈ ಮಹತ್ವದ ಆದೇಶವನ್ನು ಪ್ರಕಟಿಸಿದ್ದು, ಸಣ್ಣ-ಪುಟ್ಟ ಹೋಟೆಲ್ಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ನಿಷೇಧಿಸಿದ್ದ ಇಲಾಖೆ, ಇದೀಗ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಹೊಸ ನಿಯಮವನ್ನು ಜಾರಿಗೆ ತರುತ್ತಿದೆ.