
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 15 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿದೆ.
ಡಿಸಿಪಿ ಎಂ.ನಾರಾಯಣ್ ನೇತೃತ್ವದ ತಂಡವು 29 ಸ್ಥಳಗಳಲ್ಲಿ ದಾಳಿ ನಡೆಸಿ ಒಟ್ಟು 1909 ಜನರ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಬಂಧಿತರು ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯ ಬಾಗೇರಹತ್ ಮೂಲದವರಾಗಿದ್ದು, ಇವರ ಬಳಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ.