
ರಾಜ್ಯ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಚುರುಕುಗೊಳಿಸಿದ್ದಾರೆ.
ವಿಡಿಯೋಗಳನ್ನು ಅಪ್ಲೋಡ್ ಮಾಡುವ ಉದ್ದೇಶಕ್ಕಾಗಿಯೇ ‘ಕರ್ನಾಟಕ ಹನಿಟ್ರ್ಯಾಪ್’ ಎಂಬ ಹೆಸರಿನಲ್ಲಿ ಹೊಸ ಯೂಟ್ಯೂಬ್ ಚಾನೆಲ್ ತೆರೆಯಲಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಚಾನೆಲ್ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ 54 ಜನರು ಸಬ್ಸ್ಕ್ರೈಬ್ ಆಗಿದ್ದು, ಪೊಲೀಸರು ಅವರ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ.