
ಶಿವಮೊಗ್ಗದ ಹೊಸಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಪೋಷಕರೊಂದಿಗೆ ಶೃಂಗೇರಿಗೆ ಬಂದಿದ್ದ ಕೋಲಾರ ಮೂಲದ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ನದಿಯ ಆಳವಾದ ಸ್ಥಳಗಳಲ್ಲಿ ನಾಮಫಲಕ ಅಳವಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.