
ಸಮವಸ್ತ್ರದಲ್ಲಿದ್ದಾಗ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.
ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಡಿಐಜಿ ಪ್ರಭುಶಂಕರ್ ಅವರು ರಾಜ್ಯಾದ್ಯಂತ ಸುತ್ತೋಲೆ ಹೊರಡಿಸಿದ್ದು, ಹೆಲ್ಮೆಟ್ ಧರಿಸದಿರುವುದು ಮತ್ತು ಟ್ರಿಪಲ್ ರೈಡಿಂಗ್ನಂತಹ ನಿಯಮ ಉಲ್ಲಂಘನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಪೊಲೀಸರೇ ನಿಯಮಗಳನ್ನು ಗಾಳಿಗೆ ತೂರುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಇಲಾಖೆಯು ಈ ಕಠಿಣ ನಿರ್ದೇಶನಗಳನ್ನು ನೀಡಿದೆ.