
ಕೇರಳದ ವಯನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯ ಭರ್ತಿಯಾಗುವ ಹಂತ ತಲುಪಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 10,000 ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ.
ಬಿಡುಗಡೆಯಾದ ನೀರು ಕಪಿಲಾ ನದಿಯ ಮೂಲಕ ತಮಿಳುನಾಡಿಗೆ ಹರಿಯಲಿದ್ದು, ಒಳಹರಿವು ಹೆಚ್ಚಾಗಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣವನ್ನು ಹೆಚ್ಚಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಾಲೂಕು ಆಡಳಿತ ಮತ್ತು ನೀರಾವರಿ ಇಲಾಖೆ ಎಚ್ಚರಿಕೆ ನೀಡಿದೆ.