
ಚಂಡಮಾರುತ ಪ್ರಸರಣ ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಮ್ಯಾನ್ಮಾರ್ ಮತ್ತು ಅರೇಬಿಯನ್ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ವಾಯು ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯ ತೀವ್ರತೆ ಹೆಚ್ಚಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಒಳನಾಡಿನ ವಿಜಯಪುರ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಮುಂದುವರಿಯಲಿದೆ.