
ಕೆಪಿಎಸ್ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಾಲ್ಮೀಕಿ ನಿಗಮದ 187 ಕೋಟಿ ರೂ. ಅಕ್ರಮ ಹಣ ತೆಲಂಗಾಣ ಮತ್ತು ಬಳ್ಳಾರಿ ಚುನಾವಣೆಗೆ ಬಳಕೆಯಾಗಿದೆ ಎಂದು ಆರೋಪಿಸಿರುವ ಅಶೋಕ್, ರಾಜ್ಯದ 175 ತಾಲೂಕುಗಳಲ್ಲಿ ಬರ ಘೋಷಿಸುವಂತೆ ಒತ್ತಾಯಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ನೀಡುತ್ತಿದ್ದ ಪರಿಹಾರಕ್ಕಿಂತ ದುಪ್ಪಟ್ಟು ಪರಿಹಾರವನ್ನು ಪ್ರತಿ ಎಕರೆಗೆ 50,000 ರೂ.ನಂತೆ ನೀಡಬೇಕು ಮತ್ತು ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ.