
ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಉಪಟಳವನ್ನು ಖಂಡಿಸಿ ಸಾರ್ವಜನಿಕರೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಯಿಯ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದಲ್ಲಿ ಬೀದಿ ನಾಯಿಗಳ ದಾಳಿ ಮತ್ತು ಭಯದ ವಾತಾವರಣದ ವಿರುದ್ಧ ಅಧಿಕಾರಿಗಳ ಗಮನ ಸೆಳೆಯಲು ಈ ಸಾಂಕೇತಿಕ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಆಗಸ್ಟ್ 19ರಂದು ನಡೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ಹಾಗೂ ಸ್ಥಳೀಯರು ಆಶ್ಚರ್ಯಚಕಿತರಾದರು.